March 21, 2026

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

0
IMG-20231001-WA0007.jpg

ಬಂಟ್ವಾಳ: ಕೆ‌.ಎನ್.ಆರ್.ಸಿ.ಕಂಪೆನಿಗೆ ಸೇರಿದ ಘನಗಾತ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಇಂದು ಮಾಣಿಯ ಒಳರಸ್ತೆಯೊಂದರಲ್ಲಿ ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಇಲ್ಲದೆ ಚಾಲಕ ಪಾರಾಗಿದ್ದಾನೆ.

ಬಿಸಿರೋಡು – ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪೆನಿಗೆ ಸೇರಿದ ಲಾರಿ ಇದಾಗಿದೆ.

ಇತ್ತೀಚಿಗೆ ಸಂಸದರ ಜೊತೆಗೆ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ನಡೆಸಿದ ಸಭೆಯಲ್ಲಿ ಕೂಡ ಈ ವಿಚಾರ ಪ್ರಸ್ತಾಪವಾಗಿತ್ತು. ಕಂಪೆನಿ ವಾಹನಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡುವುದರ ಬಗ್ಗೆ ದೂರು ನೀಡಿದ ಅವರು ಈ ಬಗ್ಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಅ ಬಳಿಕವೂ ಮೆಲ್ಕಾರ್ ಸಹಿತ ಅನೇಕ ಕಡೆಗಳಲ್ಲಿ ವಾಹನ ಅಪಘಾತ ಸಂಭವಿಸಿದೆ. ಹಾಗಾಗಿ ಕಂಪೆನಿಯ ಪ್ರಮುಖರು ಈ ಬಗ್ಗೆ ಹೆಚ್ಚು ಗಮನಹರಿಸುವಂತಾಗಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!