August 13, 2026

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ

0
Ravi-Channannavar.jpg

ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಕೆಲವು ದಿನಗಳ ಹಿಂದಷ್ಟೇ ವರ್ಗಾವಣೆಗೊಂಡಿದ್ದ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ.

ಶನಿವಾರ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕುರಿತು ಪರಿಷ್ಕೃತ ಆದೇಶ ಹೊರಡಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಬೆಂಗಳೂರು ಡಿಐಜಿಯಾಗಿ ಅವರನ್ನು ತಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆ ಮಾಡಲಾಗಿದೆ.

ರವಿ ಡಿ. ಚನ್ನಣ್ಣನವರ್ ಅವರನ್ನು ಕೆಲವು ದಿನಗಳ ಹಿಂದೆ ವರ್ಗಾವಣೆ ಮಾಡಲಾಗಿತ್ತು. ಆಂತರಿಕ ಭದ್ರತಾ ವಿಭಾಗದ ಡಿಐಜಿಯಾಗಿ ನಿಯೋಜನೆ ಮಾಡಲಾಗಿತ್ತು. ಈ ಆದೇಶವನ್ನು ಪರಿಷ್ಕರಣೆ ಮಾಡಿ ಅಕ್ಟೋಬರ್ 30ರಂದು ಆದೇಶ ಹೊರಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!