ರಸ್ತೆ ದಾಟುತ್ತಿದ್ದಾಗ KSRTC ಬಸ್ ಢಿಕ್ಕಿ: ಸ್ಥಳದಲ್ಲೇ ಯುವಕ ಸಾವು
ಮೈಸೂರು: ರಸ್ತೆ ದಾಟುತ್ತಿದ್ದ ಸಂದರ್ಭ ಯುವಕನೋರ್ವನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡಿನ ಜೆಎಸ್‌ಎಸ್ ಪಾಲಿಟೆಕ್ನಿಕ್ ಕಾಲೇಜಿನ ಮುಂಭಾಗದಲ್ಲಿ ಘಟನೆ ನಡೆದಿದ್ದು, ನಂಜನಗೂಡಿನ ಈದ್ಗಾ ಮೈದಾನದ ನಿವಾಸಿ ಮುಬಾರಕ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೈಸೂರಿಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.





