ಕುಂದಾಪುರ: ಚೂರಿ ಇರಿತಕ್ಕೊಳಗಾಗಿದ್ದ ಬನ್ಸ್ ರಾಘು ಆಸ್ಪತ್ರೆಯಲ್ಲಿ ಮೃತ್ಯು
ಕುಂದಾಪುರ: ನಗರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಕುಂದಾಪುರದ ರಾಘವೇಂದ್ರ ಶೇರುಗಾರ್(42) ಅಲಿಯಾಸ್ ಬನ್ಸ್ ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ ತೀವ್ರಗೊಂಡು ವ್ಯಾಗನರ್ ಕಾರಿನಲ್ಲಿದ್ದ ವ್ಯಕ್ತಿ ರಾಘವೇಂದ್ರರ ತೊಡೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ.




