March 18, 2026

ಕಾರು–ಟ್ರಕ್‌ ನಡುವೆ ಭೀಕರ ಅಪಘಾತ: 8 ಮಂದಿ ಮೃತ್ಯು

0
image_editor_output_image673045895-1696406728745.jpg

ಲಕ್ನೋ: ಕಾರು – ಟ್ರಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

ವಾರಣಾಸಿ-ಲಖನೌ ಹೆದ್ದಾರಿಯಲ್ಲಿ ಬನಾರಸ್‌ನಿಂದ ಪಿಲಿಭಿತ್ ಕಡೆಗೆ ಹೋಗುತ್ತಿದ್ದ ಕಾರು ಟ್ರಕ್‌ಗೆ ಢಿಕ್ಕಿ ಹೊಡೆದಿದೆ. ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ 8 ಮಂದಿ ಮೃತಪಟ್ಟಿದ್ದಾರೆ.

ಮೃತರನ್ನು ವಿಪಿನ್ ಯಾದವ್ ಮತ್ತು ಅವರ ತಾಯಿ ಗಂಗಾ ಯಾದವ್, ಮಹೇಂದ್ರ ವರ್ಮಾ ಮತ್ತು ಅವರ ಪತ್ನಿ ಚಂದ್ರಕಾಳಿ , ರಾಜೇಂದ್ರ ಯಾದವ್ ಎಂದು ಗುರುತಿಸಲಾಗಿದೆ. ಇನ್ನು ಮೂವರ ಗುರುತು ಪರಿಚಯ ಇನ್ನಷ್ಟೇ ಆಗಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!