March 18, 2026

ಬಂಟ್ವಾಳ: ಬೈಕ್‌ -ಕಾರು ನಡುವೆ ಅಪಘಾತ: ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

0
IMG-20231004-WA0005.jpg



ಬಂಟ್ವಾಳ: ಬಂಟ್ವಾಳದ ಕಾಮಾಜೆ ಕ್ರಾಸ್ ಬಳಿ ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ನಡೆದಿದೆ.

ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ ಮೃತಪಟ್ಟ ವ್ಯಕ್ತಿ.

ವಾಮದಪದವನಿಂದ ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಇನ್ನು ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ‌

ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತರು ಪತ್ನಿ, ಪುತ್ರ,ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!