May 9, 2026

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

0
IMG-20231004-WA0006.jpg



ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ನಿರಾಕರಿಸಿದ .

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರುಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ.

ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!