May 9, 2026

ಬಂಟ್ವಾಳ: ಅಪರಿಚಿತ ಪ್ರಯಾಣಿಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ವಿರುದ್ದ ಕೇಸು ದಾಖಲು

0
IMG-20231004-WA0007.jpg

ಬಂಟ್ವಾಳ: ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಬೆಳಗಿನ ಸಮಯದಲ್ಲಿ ಕಾಲೇಜಿಗೆ ಹೋಗುವ ವೇಳೆ ಬಸ್ ಹತ್ತುವಾಗ ಅಪರಿಚಿತ ಪ್ರಯಾಣಿಕನೊರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.

ಬಂಟ್ವಾಳದ ಯುವತಿಯು ಮಂಗಳೂರು ಕಾಲೇಜಿಗೆ ತೆರಳುವ ಸಮಯದಲ್ಲಿ ಬಿ.ಸಿ ರೋಡು ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ವಿದ್ಯಾರ್ಥಿನಿ ಕಾಲೇಜಿಗೆ ಹೋಗುವ ಉದ್ದೇಶದಿಂದ ಕೆ.ಎಸ್.ಆರ್.ಟಿ‌.ಸಿ ಬಸ್ ಹತ್ತುವ ಸಮಯದಲ್ಲಿ ‌ಹಿಂಬದಿಯಿಂದ ಇದ್ದ ಅಪರಿಚಿತ ವ್ಯಕ್ತಿ ಲೈಂಗಿಕ ‌ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಪ್ರಶ್ನಿಸಿದಾಗ ಆತ ವಿದ್ಯಾರ್ಥಿನಿ ಬೆದರಿಸಿದ್ದಲ್ಲದೆ, ಮುಂದೆಯೇ ಇದೇ ರೀತಿ ಕಿರುಕುಳ ನೀಡುತ್ತೇನೆ ಏನು ಮಾಡುತ್ತಿ ಎಂದು ಹೆದರಿಸಿದ್ದಾನೆ ಎಂದು ಹೇಳಲಾಗಿದೆ.

ಈ ಬಗ್ಗೆ ನಿರ್ವಾಹಕನಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಯಾಣಿಕ ಹಾಗೂ ನಿರ್ವಾಹಕನ ನಡುವೆ ಮಾತು ಬೆಳೆದಿದೆ ಎನ್ನಲಾಗಿದೆ.

ಬಸ್ ನಲ್ಲಿ ನಡೆದ ಘಟನೆ ಬಗ್ಗೆ ಸ್ಥಳದಿಂದಲೇ ವಿದ್ಯಾರ್ಥಿನಿ ಪೋನ್ ಮಾಡಿ ಮನೆಯವರಿಗೆ ತಿಳಿಸಿದ್ದಾಳೆ. ಪೋಷಕರು ಮತ್ತು ವಿದ್ಯಾರ್ಥಿನಿಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

ದೂರು ನೀಡಿದ ಕೂಡಲೇ ಪ್ರಕರಣ ದಾಖಲಿಸಿಕೊಂಡು, ಕಾರ್ಯಪ್ರವೃತ್ತರಾದ ನಗರ ಠಾಣಾ ಪೋಲೀಸರು ಅಪರಿಚಿತ ಆರೋಪಿಯನ್ನು ಪತ್ತೆ ಹಚ್ಚಿ ಆತನ ಮೇಲೆ ಕಾನೂನು ‌ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

error: Content is protected !!