ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ: ವಿವಾದಾತ್ಮಕ ಕಟೌಟ್ ಗಳ ತೆರವು
ಉಡುಪಿ: ಪ್ರಚೋದನಾತ್ಮಕ ಭಾವನೆಗಳಿಗೆ ಧಕ್ಕೆ ತರುವ ಬ್ಯಾನರ್, ಬಂಟಿಂಗ್ಸ್ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದೆ. ಘಟನೆ ನಡೆಯುತ್ತಿದ್ದಂತೆ ಸರ್ಕಾರ ಎಲ್ಲಾ ಜಿಲ್ಲೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದೆ.
ಈ ಸೂಚನೆಯ ಮೊದಲ ಪರಿಣಾಮ ಕರಾವಳಿ ಜಿಲ್ಲೆ ಉಡುಪಿ ಮೇಲೆ ಬಿದ್ದಿದೆ. ಅಕ್ಟೋಬರ್ 10 ಎಂಜಿಎಂ ಮೈದಾನದಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದೆ. ಕಾರ್ಯಕ್ರಮಕ್ಕೆ ನಗರ ಸಿದ್ಧಗೊಳ್ಳುತ್ತಿದೆ. ಸರಕಾರದ ಸೂಚನೆಯಂತೆ ಎಸ್‍ಪಿ ಡಾ. ಅರುಣ್ ಕೆ ಅವರು ಎಲ್ಲಾ ಅನಧಿಕೃತ , ವಿವಾದಾತ್ಮಕ ನಿಯಮಬಾಹಿರ ಕಟೌಟ್ ಗಳನ್ನು ತೆರವು ಮಾಡಲು ಸೂಚಿಸಿದ್ದಾರೆ.




