BPL ಕಾರ್ಡ್ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಅವಕಾಶ
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪಡಿತರ ಚೀಟಿದಾರರ ಹೆಸರು ಸೇರ್ಪಡೆ ಸೇರಿದಂತೆ ಅಗತ್ಯ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ.
ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಹೆಸರು ಸೇರ್ಪಡೆ, ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದು.
ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದು, ಹೆಸರಿನಲ್ಲಿನ ಲೋಪದೋಷಗಳ ತಿದ್ದುಪಡಿ, ವಿಳಾಸ ಬದಲಾವಣೆಯಂತಹ ಪರಿಷ್ಕರಣೆಗೆ ಅವಕಾಶ ಒದಗಿಸಲಾಗಿದೆ.




