ಬಂಟ್ವಾಳ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. 2015 ರಲ್ಲಿ ಗಾಂಜಾ ಮಾರಾಟ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.




