ಪ್ರಚೋದನಕಾರಿ ಹೇಳಿಕೆ: ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು
ಶಿವಮೊಗ್ಗ: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲಾಗಿದೆ.
ಶುಕ್ರವಾರ ಇಲ್ಲಿನ ರಾಗಿಗುಡ್ಡಕ್ಕೆ ಭೇಟಿ ನೀಡಿದ್ದ ಸಂಘ ಪರಿವಾರದ ಮುಖಂಡ ಅರುಣ್ಕುಮಾರ್ ಪುತ್ತಿಲ, ನಿಷೇಧಾಜ್ಞೆ ನಡುವೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿದ್ದ ಪುತ್ತಿಲ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ʼʼರಾಗಿಗುಡ್ಡದಲ್ಲಿ ಮುಸ್ಲಿಂ ಸಮುದಾಯದಿಂದ ಘಟನೆ ನಡೆದಿದೆ. ನಮ್ಮಲ್ಲೂ ತಲ್ವಾರ್, ಶಸ್ತ್ರಾಸ್ತ್ರ ಇದೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.




