May 13, 2026

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ: ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

0
IMG-20231007-WA0000.jpg



ಬಂಟ್ವಾಳ: ಅಕ್ಕಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿದ ಘಟನೆ ಅ. 7ರ ಶನಿವಾರ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಹಂಚಿಕಟ್ಟೆ ಎಂಬಲ್ಲಿ ನಡೆದಿದೆ.


ಲಾರಿಯು ಬಂಟ್ವಾಳ ಕಡೆಯಿಂದ ಬೆಳ್ತಂಗಡಿ ಕಡೆಗೆ ಸಾಗುತ್ತಿದ್ದು, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಕೆಳಕ್ಕೆ ಕಮರಿಗೆ ಮಗುಚಿಬಿದ್ದಿದೆ. ಪಕ್ಕದಲ್ಲೇ ವಿದ್ಯುತ್ ತಂತಿ ಹಾದು ಹೋಗಿದ್ದು ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಲಾರಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!