March 18, 2026

ಬೆಂಗಳೂರು: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ: 3 ಮಂದಿ ಮೃತ್ಯು

0
New-Project-29.jpg

ಬೆಂಗಳೂರು: ಪಟಾಕಿ ಅನ್ ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 3 ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ವರದಿಯಾಗಿದೆ.

ನವೀನ್ ಎಂಬುವವರಿಗೆ ಸೇರಿದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ. ಲಾರಿಯಿಂದ ಪಟಾಕಿ ಅನ್ ಲೋಡ್ ಮಾಡುವಾಗ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಈ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಅಂಗಡಿಗಳಿಗೂ ವ್ಯಾಪಿಸಿದ್ದು, 4-5 ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಓರ್ವ ವ್ಯಕ್ತಿ ನಾಪತ್ತೆಯಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಗ್ನಿ ದುರಂತದಲ್ಲಿ ಕೋಟ್ಯಂತರ ಮೌಲ್ಯದ ಪಟಾಕಿ ಅಗ್ನಿಗಾಹುತಿಯಾಗುವುದರೊಂದಿಗೆ 1 ಕ್ಯಾಂಟ್ರೋ, 2 ಬೊಲೆರೋ, 4 ಬೈಕ್​ಗಳು ಸಹ ಬೆಂಕಿಗಾಹುತಿ ಆಗಿವೆ. ದೊಡ್ಡ ಮಳಿಗೆಯಾಗಿದ್ದರಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು, ವಾಹನ ಸವಾರರಿಗೆ ಪಟಾಕಿ ಅಂಗಡಿ ದುರಂತ ಎಫೆಕ್ಟ್ ತಟ್ಟಿದ್ದು, ಅತ್ತಿಬೆಲೆ ಕಡೆ ತೆರಳುವ ಮಾರ್ಗದಲ್ಲಿ ಟ್ರಾಫಿಕ್​ ಜಾಮ್ ಉಂಟಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!