May 13, 2026

ಮಂಗಳೂರು: ಬೈಕ್‌‌ – ಕಾರು ನಡುವೆ ಅಪಘಾತ : ಸವಾರರಿಬ್ಬರಿಗೆ ಗಂಭೀರ ಗಾಯ

0
IMG-20231008-WA0002.jpg



ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಗಾಯಗೊಂಡವರನ್ನು ಬೆಂಗರೆ ನಿವಾಸಿ ನಝೀರ್ ಎಂಬವರ ಮಗ ಮೊಯ್ದಿನ್ ನಾಝಿಮ್ ಮತ್ತು ಅವರ ಸ್ನೇಹಿತ ಸಾಲೆತ್ತೂರು ನಿವಾಸಿ ಅನಸ್ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡಿರುವ ಇಬ್ಬರನ್ನು ನಗರದ ಎರಡು ಪ್ರತ್ಯೇಕ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಶನಿವಾರ ಸಂಜೆ ನಾಝಿಮ್ ಸಾಲೆತ್ತೂರಿಗೆ ತೆರಳುವ ಸ್ನೇಹಿತ ಅನಸ್‌ರನ್ನು ತನ್ನ ಬೈಕ್ನಲ್ಲಿ ಕುಳ್ಳಿರಿಸಿಕೊಂಡು ಕೂಳೂರು ಬಸ್ ನಿಲ್ದಾಣಕ್ಕೆ ಬರುದ್ದು, ಈ ವೇಳೆ ಹಿಂದಿನಿಂದ ಬಂದ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.

ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!