ವಿರಾಟ್ ಕೊಯ್ಲಿ, ಮ್ಯಾಕ್ಸ್‌ವೆಲ್, ಸಿರಾಜ್ ರನ್ನು ತಂಡದಲ್ಲಿ ಉಳಿಸಿಕೊಂಡ ಆರ್‌ಸಿಬಿ
ಮುಂಬೈ: ಐಪಿಎಲ್ 2022 ಪಂದ್ಯಾವಳಿಗಾಗಿ ರಿಟೆನ್ಷನ್ ಆರಂಭಗೊಂಡಿದ್ದು, ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಮೂವರು ಆಟಗಾರರನ್ನು ತನ್ನಲ್ಲಿ ಉಳಿಸಿಕೊಂಡಿದೆ. ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಯ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ.
ಮೊದಲ ಆಟಗಾರನಾಗಿ ವಿರಾಟ್ ಕೊಯ್ಲಿ 15 ಕೋಟಿ, ಎರಡನೇ ಆಟಗಾರನಾಗಿ ಗ್ಲೆನ್ ಮ್ಯಾಕ್ಸ್‌ವೆಲ್ 11 ಕೋಟಿ ಹಾಗೂ ಮೂರನೇ ಆಟಗಾರನಾಗಿ ಮೊಹಮ್ಮದ್ ಸಿರಾಜ್ 7 ಕೋಟಿ ರೂಪಾಯಿ ನೀಡಿ ತನ್ನಲ್ಲೇ ಉಳಿಸಿಕೊಂಡಿದೆ.
ಬೆಂಗಳೂರು ತಂಡ ಈ ಬಾರಿ ಹಲವು ಸ್ಟಾರ್ ಆಟಗಾರರನ್ನು ಕೈಬಿಟ್ಟಿದೆ. ಕನ್ನಡಿಗ ದೇವದತ್ತ ಪಡಿಕ್ಕಲ್, ಯಜುವೇಂದ್ರ ಚಾಹಲ್, ಹರ್ಷಲ್ ಪಟೇಲ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಕೇವಲ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶವಿದ್ದರೂ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೇವಲ ಮೂರು ಮಂದಿ ಆಟಗಾರರನ್ನು ಮಾತ್ರವೇ ಉಳಿಸಿಕೊಂಡಿದೆ. ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಯ್ಲಿ, ಆಲ್‌ರೌಂಡರ್ ಸ್ಥಾನದಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ತಂಡದಲ್ಲಿಯೇ ಉಳಿದುಕೊಂಡಿದ್ದಾರೆ.