ಮಂಜೇಶ್ವರ: ರಸ್ತೆ ದಾಟುವಾಗ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು
ಮಂಜೇಶ್ವರ: ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ ವಿದ್ಯಾರ್ಥಿ ಯೋರ್ವ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ.
ಮಂಜೇಶ್ವರ ಉದ್ಯಾವರ ಕೊಳಕೆಗುತ್ತು ನಿವಾಸಿ ರಘುನಾಥ ಆಳ್ವ ರವರ ಪುತ್ರ ಸುಮಂತ್ (17) ಮೃತಪಟ್ಟ ವಿದ್ಯಾರ್ಥಿ.
ನಿಟ್ಟೆ ಕಾಲೇಜಿನ ಪ್ರಥಮ ಪಿ ಯು ಸಿ ವಿದ್ಯಾರ್ಥಿ ಯಾಗಿದ್ದ ಸುಮಂತ್ ಶನಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಯ ಉದ್ಯಾವರ ಮಾಡ ಸಮೀಪ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು.
ತಲೆಗೆ ತೀವ್ರ ಸ್ವರೂಪದ ಗಾಯಗೊಂಡಿದ್ದ ಸುಮಂತ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಕಾಲೇಜು ಬಿಟ್ಟು ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಮಂಗಳೂರು ಕಡೆಯಿಂದ ಕಾಸರಗೋಡಿನತ್ತ ತೆರಳು ತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆ ದಿದೆ. ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.




