ಕೊಪ್ಪಳ:ಗಣೇಶ ವಿಸರ್ಜನೆ ವೇಳೆ ಡಿಜೆ ಸೌಂಡ್‍ಗೆ ಯುವಕ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಸುದೀಪ್ ಸಜ್ಜನ್ (30) ಮೃತ ಯುವಕ. ಈತನಿಗೆ ಡಿಜೆ ಸೌಂಡ್ ಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಹೃದಯಾಘಾತವಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ 21 ದಿನದ ಗಣೇಶ ವಿಸರ್ಜನೆ ನಡೆದಿದೆ. ಗಂಗಾವತಿಯ ಪ್ರಶಾಂತ ನಗರದ ಯುವಕರಿಂದ ಡಿಜೆ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಅಂತೆಯೇ ಬೆಳ್ಳಂಬೆಳಗ್ಗೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಸೌಂಡ್ ಹಾಕಿ ಡ್ಯಾನ್ಸ್ ಮಾಡಲಾಗುತ್ತಿತ್ತು.