May 13, 2026

ಪಟಾಕಿ ಗೋದಾಮಿನಲ್ಲಿ ಸ್ಫೋಟ: 11 ಮಂದಿ ಸಾವು, 12 ಜನರಿಗೆ ಗಾಯ

0
image_editor_output_image-2008610617-1696924772909.jpg

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ

.ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ.

ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಈಗ ಅದು ಹೆಚ್ಚಾಗಿದ್ದು, ಸಾವು ನೋವಿನ ಬಗ್ಗೆ ಜಿಲ್ಲಾಧಿಕಾರಿ ಖಚಿತ ಮಾಡಿದ್ದಾರೆ. ವೀರಗಳೂರು ಪಟ್ಟಣದಲ್ಲಿ ನಡೆದ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರಿಯಲೂರು ಜಿಲ್ಲಾಧಿಕಾರಿ ಅನ್ನೆ ಮೇರಿ ಸ್ವರ್ಣ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!