March 18, 2026

ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ: ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

0
image_editor_output_image664365128-1696936046603.jpg

ಉಡುಪಿ: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್‌ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು.

ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!