ಚೈತ್ರಾ ಕುಂದಾಪುರ ವಂಚನೆ ಪ್ರಕರಣ: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ಪೊಲೀಸರಿಂಸ ನೋಟಿಸ್
ಮಂಗಳೂರು: ಚೈತ್ರಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಆರೋಪಿ ಚೈತ್ರಾ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದರು.
ಈ ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರನ್ನು ಸಹ ಚೈತ್ರಾ ಪ್ರಸ್ತಾಪ ಮಾಡಿದ್ದರು. ಇದೀಗ ವಂಚನೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಸ್ವಾಮೀಜಿಗೆ ನೋಟಿಸ್ ನೀಡಿದ್ದಾರೆ.
ಆದರೆ ನೋಟೀಸ್ ಬಂದ ಬಗ್ಗೆ ಸ್ವಾಮೀಜಿಗಳು ಈವರೆಗೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.




