March 19, 2026

ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತ: ಯುವಕ ಮೃತ್ಯು

0
image_editor_output_image1494008580-1697005668796.jpg

ಉಳ್ಳಾಲ: ಮುಂಭಾಗದಲ್ಲಿ ಸಂಚರಿಸುತ್ತಿದ್ದ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂದಿನಲ್ಲಿದ್ದ ದ್ವಿಚಕ್ರ ವಾಹನವು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿ ಸವಾರ ಮೃತಪಟ್ಟ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಮುಂಜಾನೆ ನಡೆದಿದೆ.

ಮೀನುಗಾರಿಕೆಯ ಕೆಲಸಕ್ಕೆಂದು ತೆರಳುತ್ತಿದ್ದ ಅಝ್‌ವೀನ್ 3:30ರ ವೇಳೆಗೆ ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ

ಮೃತ ಸವಾರನನ್ನು ಮೂಲತಃ ಉಳ್ಳಾಲದ ಪ್ರಸ್ತುತ ಕೋಟೆಕಾರ್‌ನಲ್ಲಿ ನಿವಾಸಿ ಅಝ್‌ವೀನ್ (21)ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!