March 19, 2026

ಉಳ್ಳಾಲ: ಬಸ್ – ಸ್ಕೂಟರ್ ಗಳ ಸರಣಿ ಅಪಘಾತ:
ಕೊಂಡಾಣ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ಗಂಭೀರ ಗಾಯ

0
IMG-20231011-WA0001.jpg

ಉಳ್ಳಾಲ: ಕರ್ನಾಟಕ ಸಾರಿಗೆ ಬಸ್ ಹಾಗೂ ಸ್ಕೂಟರ್ ಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಅಡ್ಕ ನಿವಾಸಿ ಕೃಷ್ಣ ಶೆಟ್ಟಿ ತಾಮಾರ್(65) ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ಕೋಟೆಕಾರು ಬೀರಿ ಜಂಕ್ಷನ್ನಿನಲ್ಲಿ ಸಂಭವಿಸಿದೆ.

ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ,ಬಂಟ,ಮುಂಡತ್ತಾಯ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು,ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನು ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಜೆ ತಾಮಾರ್ ಅವರು‌ ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್, ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ. ಈ ಸಂದರ್ಭ ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ‌ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.ಗಂಭೀರ ಗಾಯಗೊಂಡು ಅರೆಪ್ರಜ್ಞಾವಸ್ಥೆಯಲ್ಲಿದ್ದ ಕೃಷ್ಣ ಶೆಟ್ಟಿ ಅವರನ್ನು ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ.ಮತ್ತೋರ್ವ ಬೈಕ್ ಸವಾರ ಸಣ್ಣ ,ಪುಟ್ಟ ಗಾಯಗಳಿಂದ ಪಾರಾಗಿದ್ದು,ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!