March 19, 2026

ರಾಜ್ಯ ಸರ್ಕಾರದಿಂದ ಕಂಬಳಕ್ಕೆ 1 ಕೋಟಿ ರೂ. ಸಹಾಯಧನ

0
IMG-20230923-WA0030.jpg


 
ಬೆಂಗಳೂರು : 20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ರೂ ಸಹಾಯಧನವನ್ನು ಈ ಹಿಂದಿನಂತೆ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಬೆಂಗಳೂರು ಕಂಬಳ- ನಮ್ಮ ಕಂಬಳದ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ದೇಸಿ ಹಾಗೂ ಐತಿಹಾಸಿಕವಾದ ಕಂಬಳ ಕ್ರೀಡೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದರು. “ಕಂಬಳಕ್ಕೆ ಸಹಾಯಧನ ಬಿಡುಗಡೆ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು ಎಂದರು.

ನಮ್ಮ ಸಂಸ್ಕೃತಿಯನ್ನು ಉಳಿಸಿ, ಪರಿಚಯಿಸಬೇಕು ಎಂದು ಶಾಸಕ ಅಶೋಕ್ ರೈ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಒಂದಾಗಿರುವುದು ಸಂತೋಷದ ವಿಚಾರ ಎಂದರು.

ಉಳಿಪೆಟ್ಟು ಬೀಳದೆ ಯಾವುದೇ ಶಿಲೆ ಪ್ರತಿಮೆ ಆಗುವುದಿಲ್ಲ. ಭೂಮಿ ಉಳದೆ ಯಾವುದೇ ಬೆಳೆ ಬೆಳೆಯಲು ಆಗುವುದಿಲ್ಲ. ಅದರಂತೆ ಅರಮನೆ ಮೈದಾನದಲ್ಲಿ ಒಂದಷ್ಟು ಅಭಿವೃದ್ದಿ ಕೆಲಸಗಳನ್ನು ಈ ನೆಪದಲ್ಲಿ ಮಾಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂದಂತಹ ಸದಾನಂದ ಗೌಡರು, ಹ್ಯಾರಿಸ್ ಅವರು ಬೆಂಗಳೂರಿನಲ್ಲಿ ನಾಯಕರಾಗಿ ಬೆಳೆದಿದ್ದಾರೆ ಎಂದು ಹೇಳಿದರು.

ಕರ್ನಾಟಕದ ಕರಾವಳಿ ಭಾಗ ಈ ದೇಶದ ದೊಡ್ಡ ಆಸ್ತಿ. ಉದ್ದಿಮೆ, ಶಿಕ್ಷಣ, ಹೋಟೆಲ್ ಉದ್ಯಮ, ಪ್ರವಾಸೋದ್ಯಮ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಹೆಸರು ಮಾಡಿದವರು. ತಮ್ಮ ಸಂಪ್ರದಾಯವನ್ನು ಬೆಂಗಳೂರಿನ ಜನತೆಗೂ ಪರಿಚಯಿಸಲು ಹೊರಟಿರುವ ಶಾಸಕ ಅಶೋಕ್ ರೈ ಅವರ ಕೆಲಸ ಶ್ಲಾಘನೀಯ” ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!