ಹಳಿತಪ್ಪಿದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲಿನ 21 ಬೋಗಿಗಳು: ನಾಲ್ವರು ಸಾವು, ಹಲವರು ಗಾಯ
ಬಿಹಾರ್: ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಸಮೀಪ ನಿನ್ನೆ ರಾತ್ರಿ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲಿನ 21 ಬೋಗಿಗಳು ಹಳಿತಪ್ಪಿ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಆನಂದ್ ವಿಹಾರ್ ಟರ್ಮಿನಲ್‌ನಿಂದ ಕಾಮಾಕ್ಯಕ್ಕೆ ತೆರಳುತ್ತಿದ್ದ ನಾರ್ತ್ ಈಸ್ಟ್ ಸೂಪರ್‌ಫಾಸ್ಟ್ ರೈಲು ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ರಾತ್ರಿ 9:35 ಕ್ಕೆ ಹಳಿತಪ್ಪಿತು ಎಂದು ರೈಲ್ವೆ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.
ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ ಎಂದು ಕೇಂದ್ರ ಸಚಿವ ಅಶ್ವಿನಿ ಕುಮಾರ್ ಮಾಹಿತಿ ನೀಡಿದ್ದಾರೆ.




