March 28, 2026

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ  ಮಗಳನ್ನು ಕೊಂದ ತಂದೆ

0
image_editor_output_image-1558683697-1697096719838.jpg

ಚಿಕ್ಕಬಳ್ಳಾಪುರ: ದಿನೇ ದಿನೇ ಸಿಲಿಕಾನ್‌ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ.

ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ಬುಧವಾರ ತಡರಾತ್ರಿ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.

ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ.

ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!