February 4, 2026

23 ಬಾಕ್ಸ್ ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ

0
image_editor_output_image-1629298428-1697191165230.jpg

ಬೆಂಗಳೂರು: ನಗರದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಿನ್ನೆ ಗುರುವಾರದಿಂದ ದಾಳಿ ನಡೆಸಿ ಕಾರ್ಯಾಚರಣೆ ನಡೆಸುತ್ತಿದ್ದು ಕಂತೆ ಕಂತೆ ನೋಟು, ಅಪಾರ ಪ್ರಮಾಣದ ನಗ ನಾಣ್ಯಗಳು ಪತ್ತೆಯಾಗಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಸಿಕ್ಕಿದೆ.

ಏಕಕಾಲದಲ್ಲಿ ಆರ್ಟಿ ನಗರದ ಎರಡು ಸ್ಥಳಗಳ ಮೇಲೆ ಐಟಿ ದಾಳಿ ನಡೆದಿದ್ದು, ಆತ್ಮಾನಂದ ಕಾಲೋನಿಯ ಫ್ಲಾಟ್ ಒಂದರ ಕೊಠಡಿಯಲ್ಲಿದ್ದ ಮಂಚದಡಿ ಕಂತೆ ಕಂತೆ ನೋಟುಗಳು ಕಂಡು ಅಧಿಕಾರಿಗಳು ಬೆಚ್ಚಿಬಿದ್ದರು. ಫ್ಲಾಟ್ನಲ್ಲಿ ಬರೊಬ್ಬರಿ 23 ಬಾಕ್ಸ್ ಗಳಲ್ಲಿ 500 ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಾಗಿತ್ತು ಎಂದು ತಿಳಿದುಬಂದಿದೆ.

ಆತ್ಮಾನಂದ ಕಾಲೋನಿಯ ಫ್ಲಾಟ್ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಮಂಚದಡಿ ಪರಿಶೀಲನೆ ನಡೆಸಿದಾಗ ಕೋಟ್ಯಂತರ ರೂಪಾಯಿ ಪತ್ತೆಯಾಗಿದೆ. ಪತ್ತೆಯಾದ ಹಣದ ಒಟ್ಟಾರೆ ಮೊತ್ತ ಎಣಿಕೆ ಮಾಡಿದ ಐಟಿ ಅಧಿಕಾರಿಗಳು, ಬಳಿಕ ಮಾಜಿ ಕಾರ್ಪೋರೇಟರ್ ಮನೆ ಬಾಗಿಲು ತಟ್ಟಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!