May 14, 2026

ಬಂಟ್ವಾಳ: ಅಕ್ರಮ ಮರಳು ಪ್ರಕರಣ: ತಲೆಮರೆಸಿಕೊಂಡಿದ್ದ ಆರು ಆರೋಪಿಗಳ ಬಂಧನ

0
IMG-20231013-WA0001.jpg

ಬಂಟ್ವಾಳ: ಕಳೆದ ಐದು ವರ್ಷಗಳಿಂದ ಅಕ್ರಮ ಮರಳು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.

ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

error: Content is protected !!