February 3, 2026

ಬಿಎಂಟಿಸಿ ಬಸ್ ಹರಿದು ಇಂಜಿನಿಯರ್ ವಿದ್ಯಾರ್ಥಿ ಮೃತ್ಯು: 10 ದಿನಗಳಲ್ಲಿ ಮೂರನೇ ಬಲಿ
 

0
hr14.10.23-bmtc.jpg


ಬೆಂಗಳೂರು: ಬಿಎಂಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಬಸ್ ಡಿಕ್ಕಿ ಹೊಡೆದು ಇಂಜಿನಿಯರ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಳೆದ 10 ದಿನಗಳಲ್ಲಿ ಬಿಎಂಟಿಸಿ ಬಸ್ ಅಪಘಾತದಲ್ಲಿ ಮೂರನೇ ಬಲಿ ಇದಾಗಿದೆ.

ಗಂಗಾಧರ್ (21) ಮೃತ ವಿದ್ಯಾರ್ಥಿ.

ಇಂಟರ್ನಿಶಿಫ್ ಸರ್ಟಿಫಿಕೇಟ್ ತರಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಗಂಗಾಧರ್​ಗೆ ಹೂವಿನ ಮಾರ್ಕೆಟ್ ಸಮೀಪ ಹಿಂಬಂದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಗಂಗಾಧರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ಘಟನೆ ಸಂಬಂಧ ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.”

Leave a Reply

Your email address will not be published. Required fields are marked *

error: Content is protected !!