March 21, 2026

ಬಿಜೆಪಿ ಮಹಿಳಾ ಕಾರ್ಯಕರ್ತೆಯ ಮೇಲೆ ಎಫ್ ಐಆರ್ ದಾಖಲು
 

0
14-10-2023akshakku.jpg


ತುಮಕೂರು: ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಶಾಪಿಂಗ್ ಮಾಲ್‍ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಈ ಸಂಬಂಧ ಜಯನಗರ ಠಾಣೆಯಲ್ಲಿ ಸುಮುಟೋ ಕೇಸ್ ದಾಖಲಿಸಲಾಗಿತ್ತು.

ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ ಎಂದು ಹ್ಯಾಸ್ ಟ್ಯಾಗ್ ಬಳಸಿ ಡಿ.ಕೆ. ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು.

ಈ ಹಿನ್ನಲೆ ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!