September 19, 2024

ಏಕದಿನ ವಿಶ್ವಕಪ್: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

0


ಅಹ್ಮದಾಬಾದ್: ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023ರ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 7 ವಿಕೆಟ್ ಗಳ ಭಾರೀ ಜಯಗಳಿಸಿದೆ.

ರೋಹಿತ್ ಶರ್ಮಾ ಅವರು ಸ್ಫೋಟಕ ಬ್ಯಾಟಿಂಗ್ ನಡೆಸಿ 86 ರನ್ ಗಲಿಸಿದ್ದು, ಪಾಕ್ ವಿರುದ್ಧ ಭಾರತ ಏಕದಿನ ವಿಶ್ವಕಪ್ ನಲ್ಲಿ 8 ನೇ ಬಾರಿ ಸೋಲಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಭಾರತದ ವಿರುದ್ದ 191 ರನ್ಗೆ ಆಲೌಟ್ ಆಯಿತು. ಬಳಿಕ ಟಾರ್ಗೆಟ್ ಬೆನ್ನಟ್ಟಲು ಬಂದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆಗೆ 2 ಪ್ರಮುಖ ವಿಕೆಟ್ ಕಳೆದುಕೊಂಡಿತು.

ಶುಭ್ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ತಲಾ 16 ರನ್ ಗಳಿಸಿ ಔಟಾಗಿದ್ದು, ರೋಹಿತ್ ಶರ್ಮಾ ಸ್ಫೋಟಕ ಬ್ಯಾಟ್ ಬೀಸಿ 36 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!