March 21, 2026

ಪುತ್ತೂರು: ಮಹಿಳೆಯ ಚಿನ್ನದ ಸರ ಕಸಿದು ಪರಾರಿ: ದೂರು ದಾಖಲು

0
IMG-20231015-WA0000.jpg



ಪುತ್ತೂರು: ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಾಲ್ವರು ಅಲೆಮಾರಿ ಮಹಿಳೆಯರ ತಂಡವೊಂದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದು ಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.

ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಎಂಬವರು ಚಿನ್ನದ ಸರ ಕಳಕೊಂಡಿದ್ದು, ಸುಂದರಿ ಅವರು ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ನಾಲ್ವರು ಅಲೆಮಾರಿ ಮಹಿಳೆಯರ ತಂಡ ಏಕಾಏಕಿ ಅವರನ್ನು ಸುತ್ತುವರಿದು, ಅವರ ಕುತ್ತಿಗೆಯಲ್ಲಿದ್ದ ಸುಮಾರು ಮೂವರು ಪವನ್ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಇನ್ನು ಸರವನ್ನು ಕಳಕೊಂಡ ಸುಂದರಿ ಅವರು ಈ ವಿಚಾರವನ್ನು ನಗರದ ಜಂಕ್ಷನ್‍ನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸೊಬ್ಬರಿಗೆ ತಿಳಿಸಿದ್ದು, ಬಳಿಕ ಪುತ್ತೂರು ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!