February 4, 2026

ಮಂಗಳೂರು: ಅಕ್ರಮ ಬೆಟ್ಟಿಂಗ್ ದಂಧೆ: ಇಬ್ಬರು ಸಿಸಿಬಿ ಪೊಲೀಸರ ವಶಕ್ಕೆ

0

ccccb

image_editor_output_image-587542937-1697380024580.jpg


 
ಮಂಗಳೂರು: ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹಳೆಯಂಗಡಿ ನಿವಾಸಿ ದೀಪಕ್ (33)ಕಾವೂರು ನಿವಾಸಿ ಸಂದೀಪ್ ಶೆಟ್ಟಿ( 38) ಬಂಧಿತ ಆರೋಪಿಗಳು. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ನ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಆರೋಪಿಗಳಿಂದ 31,000 ರೂ., 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು ಸೊತ್ತುಗಳ ಮೌಲ್ಯ ಅಂದಾಜು 1,11,000 ರೂ. ಎಂದು ಅಂದಾಜಿಸಲಾಗಿದೆ.

ಬೆಟ್ಟಿಂಗ್‌ ದಂಧೆ ಪ್ರಕರಣದಲ್ಲಿ ಹಲವು ಮಂದಿ ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರೆದಿದೆ. ಈ ಕುರಿತು ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.”

Leave a Reply

Your email address will not be published. Required fields are marked *

You may have missed

error: Content is protected !!