ದಾವಣಗೆರೆ:ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ್ ಪತ್ನಿ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಘಟನೆ ನಡೆದಿದೆ.