May 9, 2026

ಪೆರ್ನೆಯ ವಿಷ್ಣುಮೂರ್ತಿ ದೇವರ ಆಭರಣಗಳು ಕಳವು: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ FIR ದಾಖಲು

0
image_editor_output_image567929992-1697435964572.jpg

ಉಪ್ಪಿನಂಗಡಿ : ಪೆರ್ನೆಯ ಕಳೆಂಜ ದೇಂತಡ್ಕದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವರಿಗೆ ಸಮರ್ಪಿಸಲಾದ ಆಭರಣಗಳು ನಾಪತ್ತೆಯಾಗಿರುವುದು ಅ.15ರಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ದೇವಾಲಯದ ಮಾಜಿ ಕಾರ್ಯದರ್ಶಿ ಗೋಪಾಲ ಶೆಟ್ಟಿ ಎನ್. ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಈ ದೇವಾಲಯದ ಬ್ರಹ್ಮಕಲಶಾಭಿಷೇಕ ನಡೆದಿದ್ದು, ಈ ಸಮಯದಲ್ಲಿ ದೇವರಿಗೆ ಭಕ್ತಾದಿಯೋರ್ವರು ಸುಮಾರು ಮೂರು ಮುಕ್ಕಾಲು ಪವನಿನ ಐದು ಎಳೆಗಳಿಂದ ಕೂಡಿದ ಚಿನ್ನದ ಜೋ ಮಾಲೆಯನ್ನು ಸಮರ್ಪಿಸಿದ್ದರು.

ಅದು ಮತ್ತು ಎರಡು ಪವನಿನ ಚಿನ್ನದ ಸರ ನಾಪತ್ತೆಯಾಗಿದೆ. ಸರಕಾರ ದೇವಾಲಯಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಿದ್ದು, ಅಧಿಕಾರ ಸ್ವೀಕರಿಸಿದ ಅವರು ಅ.15ರಂದು ಭಕ್ತಾದಿಗಳ ಸಮ್ಮುಖದಲ್ಲಿ ಮಹಜರು ನಡೆಸಿದಾಗ ಚಿನ್ನದ ಸರಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!