March 21, 2026

ಮಂಗಳೂರು: ವಿವಿಧ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

0
image_editor_output_image-366239931-1697437240344.jpg

ಮಂಗಳೂರು: ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ, 2016ರಲ್ಲಿ ನಡೆದ ದೊಂಬಿ, ಗಲಾಟೆ ಗಲಭೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ.

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿದ್ದ ತೌಸೀಫ್, ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.

Leave a Reply

Your email address will not be published. Required fields are marked *

You may have missed

error: Content is protected !!