May 14, 2026

ಪ್ರಿಯಕರನ ಜೊತೆ ಸೇರಿ ಅತ್ತೆಯನ್ನು ಬರ್ಬರವಾಗಿ ಕೊಲೆಗೈದ ಸೊಸೆ

0
image_editor_output_image1932116863-1697522468095.jpg

ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಅತ್ತೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಸೊಸೆ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ರಶ್ಮಿ, ಪುರುಷೋತ್ತಮ್, ಅಕ್ಷಯ್ ಬಂಧಿತ ಆರೋಪಿಗಳು. ಈ ಮೂವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ರಶ್ಮಿಯು ಮಂಜುನಾಥ್ ಎಂಬಾತನನ್ನು ಮದುವೆಯಾಗಿದ್ದಳು. ಆದರೆ ಕ್ರಮೇಣ ತಮ್ಮ ಮನೆಯ ಮೇಲೆ ಬಾಡಿಗೆಗೆ ಇದ್ದ ಅಕ್ಷಯ್ ಜೊತೆ ಸಂಪರ್ಕ ಹೊಂದಿದ್ದಳು.

ಇತ್ತ ಮನೆಯ ಹಣದ ವ್ಯವಹಾರ ಸಂಬಂಧ ಲಕ್ಷ್ಮಮ್ಮ ಹಾಗೂ ರಶ್ಮಿ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ತಾನೇ ಮನೆ ವ್ಯವಹಾರ ನೋಡಿಕೊಳ್ಳಬೇಕು ಎಂದು ರಶ್ಮಿ ಕಾದು ಕುಳಿತಿದ್ದಳು. ಅದರಂತೆ ಪ್ರಿಯಕರನ ಜೊತೆ ಸೇರಿ ಅತ್ತೆಯನ್ನೇ ಕೊಲೆ ಮಾಡುವ ಪ್ಲಾನ್ ಮಾಡಿದ್ದಳು.

Leave a Reply

Your email address will not be published. Required fields are marked *

error: Content is protected !!