ನಡು ರಸ್ತೆಯಲ್ಲಿ ಹೊತ್ತಿ ಉರಿದ ಟ್ರಕ್: ನಾಲ್ವರು ಸಜೀವ ದಹನ
ಮಹಾರಾಷ್ಟ್ರ: ನಡು ರಸ್ತೆಯಲ್ಲಿ ಟ್ರಕ್ ವೊಂದು ಹೊತ್ತಿ ಉರಿದ ಪರಿಣಾಮ ನಾಲ್ವರು ಸಜೀವ ದಹನವಾಗಿರುವ ಘಟನೆ ಪುಣೆಯ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.
ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ನವಲೆ ಸೇತುವೆಯ ಸಮೀಪದಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನದ ಬಳಿ ಈ ಘಟನೆ ಸಂಭವಿಸಿದೆ ಎಂದು ಸಿನ್ಹಗಡ್ ರೋಡ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಅಭಯ್ ಮಹಾಜನ್ ತಿಳಿಸಿದ್ದಾರೆ.




