February 4, 2026

ಕಾರ್ಕಳ: ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image430093919-1697523644164.jpg

ಕಾರ್ಕಳ:

ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ.


ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ಮನೆಯಿಂದಲೇ ಕೆಲಸ ನಿರ್ವಹಣೆ ಮಾಡುತ್ತಿದ್ದಳು.


ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!