June 12, 2026

ಉಳ್ಳಾಲ: ರಿಕ್ಷಾ ಚಾಲಕ ಆತ್ಮಹತ್ಯೆ

0
image_editor_output_image-883189202-1697557407161.jpg


 
ಉಳ್ಳಾಲ: ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತೊಕ್ಕೊಟ್ಟು ರಿಕ್ಷಾ ಪಾರ್ಕ್‌ ನಲ್ಲಿ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದ ಕೆರೆಬೈಲು ಸೇವಂತಿಗುಡ್ಡೆ ನಿವಾಸಿ ಸಮೀರ್‌ (45) ಸಾವಿಗೆ ಶರಣಾದವರು.

ತಮ್ಮ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ವಿವಾಹಿತರಾಗಿರುವ ಸಮೀರ್‌ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ನಡೆಸಿರುವ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!