March 18, 2026

ಅರಣ್ಯಾಧಿಕಾರಿಗೆ ನಿಂದನೆ: ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು FIR ದಾಖಲು

0
image_editor_output_image-1103517288-1697608067814.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಮೇಲೆ ಎಫ್‍ಐಆರ್ ದಾಖಲಾಗಿದೆ.

ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ದೂರಿನ ಹಿನ್ನೆಲೆಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಅಂದರೆ ಅ. 8ರಂದು ಚಾರ್ಮಾಡಿ ಅರಣ್ಯದಲ್ಲಿ ಮನೆ ನಿರ್ಮಾಣ-ತೆರವು ಸಂಬಂಧ ಅರಣ್ಯಾಧಿಕಾರಿಗಳು-ಶಾಸಕರ ನಡುವೆ ಭಾರೀ ಜಟಾಪಟಿ ನಡೆದಿತ್ತು. ಈ ವೇಳೆ ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಶಾಸಕರು ಬೈದಿದ್ದಾರೆ ಎಂದು ದೂರು ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!