March 18, 2026

5 ಲಕ್ಷ ರೂ. ಸಾಲ ತೀರಿಸಲಾಗದೇ ಯುವಕ ಆತ್ಮಹತ್ಯೆ

0
image_editor_output_image-1509613786-1697621178579.jpg

ಚಿಕ್ಕಮಗಳೂರು: ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಮಂಜುನಾಥ( 38) ಮೃತ ದುದೈವಿ.

ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್ ಮತ್ತಿತರ ಕಡೆಗಳಲ್ಲಿ ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ.

ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Leave a Reply

Your email address will not be published. Required fields are marked *

error: Content is protected !!