ಮಂಗಳೂರು: ಯುವಕನಿಗೆ ಮಾರಣಾಂತಿಕ ಹಲ್ಲೆ ಪ್ರಕರಣ:
10ಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ

ಮಂಗಳೂರು: ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರ್ಕೆಯಲ್ಲಿ ನಡೆದ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 10ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಶ್ರವಣ್ ಎನ್ನುವಾತನ ಮೇಲೆ ಕಳೆದ ಶನಿವಾರ ತಡರಾತ್ರಿ ಎಂಟಕ್ಕೂ ಅಧಿಕ ಮಂದಿ ದಾಳಿ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದೊಂದು ಗ್ಯಾಂಗ್ ವಾರ್ ಆಗಿದ್ದು 2020ರಲ್ಲಿನಡೆದ ಇಂದ್ರಜಿತ್ ಕೊಲೆಗೆ ಪ್ರತಿಕಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2020 ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತೀಕಾರವಾಗಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.ಇಂದ್ರಜಿತ್ ನನ್ನು ಬೇಳೂರು ಗ್ಯಾಂಗ್ ಅಥವಾ ತಲ್ವಾರ್ ಜಗ್ಗಾ ಗ್ಯಾಂಗ್ ಕೊಲೆಗೈದಿತ್ತು. ಗಾಯಳು ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಆರೋಪಿಯ ಸಹೋದರನಾದ ಅಂಕಿತ್ ನ ಸ್ನೇಹಿತನಾಗಿದ್ದಾನೆ.
ಉರ್ವಾ ಪೊಲೀಸ್ ಠಾಣೆಯಲ್ಲಿ ಐಪಿಸಿ 307 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.