May 9, 2026

ನಾಪತ್ತೆಯಾಗಿದ್ದ ವಕೀಲನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

0
image_editor_output_image-324723810-1697697401202.jpg

ಬಾಗಲಕೋಟೆ: ಕಾಣೆಯಾಗಿದ್ದ ವಕೀಲ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ.

ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು.

ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಇವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಪರಿಚಿತರು ಇವರ ತಲೆ ಮತ್ತು ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

Leave a Reply

Your email address will not be published. Required fields are marked *

error: Content is protected !!