March 18, 2026

ಉಡುಪಿ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 30 ವರ್ಷ ಕಠಿಣ ಜೈಲುಶಿಕ್ಷೆ

0
1697723496371.jpg


 
ಉಡುಪಿ: 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯವು ವಿಧಿಸಿದೆ.

ಬೈಂದೂರಿನ ಹೆರಂಜಾಲು ಗ್ರಾಮದ ಗಿರೀಶ್(24) ಎಂಬ ಯುವಕನು 15 ವರ್ಷದ ಬಾಲಕಿಯನ್ನು ತನ್ನ ಚಿಕ್ಕಮ್ಮನ ಮನೆಯಲ್ಲಿ ಪರಿಚಯ ಮಾಡಿಕೊಂಡಿದ್ದು ಬಾಲಕಿಯನ್ನು ಪ್ರೀತಿಸುತ್ತೇನೆಂದು ತಿಳಿಸಿದ್ದನು. 2021 ರ ಆಗಸ್ಟ್ ತಿಂಗಳಲ್ಲಿ ನಿರ್ಜನ ಪ್ರದೇಶಕ್ಕೆ ಬೈಕ್ ನಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಆಕೆಯನ್ನು ಮದುವೆಯಾಗುವಂತೆ ನಂಬಿಸಿ ಆಕೆಗೆ ದೈಹಿಕ ಸಂಪರ್ಕವನ್ನು ನಡೆಸಿದ್ದನು. ಆಕೆಯ ದೇಹದ ಬದಲಾವಣೆಗಳನ್ನು ತಿಳಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂತು.

ಇನ್ನು ಬಾಲಕಿ ನೀಡಿದ ದೂರಿನಂತೆ ವಿಚಾರಣೆಯನ್ನು ನಡೆಸಲಾಗಿದ್ದು, ವಿಚಾರಣೆ ವೇಳೆ ಬಾಲಕಿಯು ಅಭಿಯೋಜನೆಗೆ ಪೂರಕ ಸಾಕ್ಷಿ ನೀಡಿದ್ದು, ಸಾಕ್ಷಿ ಮತ್ತು ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನುಡಿದಿದ್ದರಿಂದ ಯುವಕನಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಇಂದು ಆದೇಶಿಸಿದೆ.

Leave a Reply

Your email address will not be published. Required fields are marked *

error: Content is protected !!