ಬಂಟ್ವಾಳ: ಪ್ರೇಮ ವೈಫಲ್ಯ, ಮಾನಸಿಕವಾಗಿ ನೊಂದು ಯುವಕ ಆತ್ಮಹತ್ಯೆ
ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.
ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.
ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆಗೊಂಡು ಚೀಟಿ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ




