ಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ: ಅನೇಕ ಮಂದಿಯ ಬಂಧನ
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷ ದಸರಾ ಆಚರಣೆ ಮಾಡಲು ಬಂದಿದ್ದ ಸಂಘಟನೆಯೊಂದರ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ನಗರದ ಹನುಮಂತಪ್ಪ ವೃತ್ತದಲ್ಲಿ ಅಂಗಡಿ ಚಂದ್ರು ನೇತೃತ್ವದಲ್ಲಿ ಪ್ರಗತಿಪರ ಸಂಘಟನೆ ಕಾರ್ಯಕರ್ತರು ಮಹಿಷಾಸುರನ ಭಾವಚಿತ್ರ ಪ್ರದರ್ಶನ ಮಾಡಿದ್ದಾರೆ ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ತಡೆಯಲು ಮುಂದಾಗಿದ್ದು ಈ ವೇಳೆ ಕಾರ್ಯಕರ್ತರು ಪೋಲೀಸರ ವಿರುದ್ಧ ಕಿಡಿಕಾರಿದ್ದಾರೆ.
ಇನ್ನು ಮಹಿಷಾಸುರನ ಆಚರಣೆಗೆ ಅವಕಾಶ ನೀಡದ ನಿಟ್ಟಿನಲ್ಲಿ ಆಕ್ರೋಶಗೊಂಡ ಕಾರ್ಯಕರ್ತರು ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ದಲಿತ ಸಂಘಟನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.