November 22, 2024

ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ

0


ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಅಬ್ದುಲ್ ಅಜೀಜ್ @ ಪೋಕರ್ ಅಜೀಜ್(42) ಬಂಧಿತ ಆರೋಪಿ.

ಈ ಹಿಂದೆ ಹಲವು ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಯೋರ್ವನು ಮಂಗಳೂರು ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಟೆಯ ಪರಿಸರದಲ್ಲಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಗಳು-2, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿರುತ್ತದೆ. ಈತನು ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಅಲ್ಲಿಯ ಕಾರಾಗೃಹ ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!