March 18, 2026

ಸಾಮಾಜಿಕ ಬಹಿಷ್ಕಾರ: ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-1882786869-1697875492419.jpg

ಚಾಮರಾಜನಗರ: ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಂಡ್ಲುಪೇಟೆಯ ಯಡವನಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ವೈ.ಎಸ್ ಶಿವರಾಜು (45) ನೇಣಿಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ (Police) ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!