ಬಂಟ್ವಾಳದಲ್ಲಿ ಎಸ್ ಡಿ ಪಿ ಐ ಪಕ್ಷ ಸಮಾವೇಶ
ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶವು ಬಂಟ್ವಾಳ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅನ್ವರ್ ಬಡಕಬೈಲ್ ರವರ ಅಧ್ಯಕ್ಷತೆಯಲ್ಲಿ ಇಂದು ಎಸ್. ಎಸ್ ಆಡಿಟೋರಿಯಂ ಆಲಡ್ಕದಲ್ಲಿ ನಡೆಯಿತು.
ಎಸ್ ಡಿ ಪಿ ಐ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಪ್ಸರ್ ಕೊಡ್ಲಿಪೇಟೆ ಮಾತನಾಡುತ್ತಾ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ನೀಡಿದ ಭರವಸೆಯನ್ನು ಈಡೇರಿಸದೆ ವಂಚಿಸುತ್ತಿದ್ದು, ಮಾತ್ರವಲ್ಲದೆ ಬಿಜೆಪಿ ಅನುಸರಿಸುತ್ತಿದ್ದ ತಾರತಮ್ಯ ನೀತಿಯನ್ನು ಕಾಂಗ್ರೆಸ್ ಸರಕಾರ ಮುಂದುವರಿಸುತ್ತಿದ್ದು ಇದು ಮುಸ್ಲಿಮರ ಮತವನ್ನು ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮುಸ್ಲಿಮರಿಗೆ ಮಾಡುವ ದ್ರೋಹವಾಗಿದೆ ಎಂದು ಮಾತನಾಡುತ್ತಾ ಅತಿಥಿ ಭಾಷಣ ಮಾಡಿದರು.
ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್‍ಡಿಪಿಐ ಪಕ್ಷವು ನಡೆಸಿದ ಹೋರಾಟದ ಬಗ್ಗೆ ವಿವರಿಸಿ ಮಾತನಾಡುತ್ತ ಮುಂದಿನ ದಿನಗಳಲ್ಲಿ ಪಕ್ಷವು ಇನ್ನಷ್ಟು ಹೋರಾಟಗಳನ್ನು ಕೈಗೆತ್ತಿಗೊಳ್ಳಲಿದ್ದೇವೆ ತಾವೆಲ್ಲರೂ ಪಕ್ಷದ ಬೆನ್ನೆಲುಬಾಗಿ ನಿಂತು ನಮ್ಮೊಂದಿಗೆ ಸಹಕರಿಸಬೇಕೆಂದು ಹೇಳುತ್ತಾ ಸಮಾರೋಪ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರಾಧ್ಯಕ್ಷರಾದ ಮೂನಿಷ್ ಆಲಿ, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಮೂಸಬ್ಬ ತುಂಬೆ, ನಝೀರ್ ಫರಂಗಿಪೇಟೆ, ವಿಮೆನ್ಸ್ ಇಂಡಿಯಾ ಮೂಮೆಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ನೌರೀನ್ ಆಲಂಪಾಡಿ,ಜಿಲ್ಲಾ ಸಮಿತಿ ಸದಸ್ಯೆ ಝಹನ ಅಕ್ಕರಂಗಡಿ, ವಿಮ್ ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಫೌಝಿಯಾ ಆಲಂಪಾಡಿ, ಬಂಟ್ವಾಳ ಪುರಸಭಾ ಸದಸ್ಯೆ ಝೀನತ್ ಗೂಡಿನಬಳಿ ಉಪಸ್ಥಿತರಿದ್ದರು.
ಬಂಟ್ವಾಳ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ಸ್ವಾಗತಿಸಿ, ಮನ್ಸೂರ್ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.